Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:18 - ಕನ್ನಡ ಸತ್ಯವೇದವು J.V. (BSI)

18 ನನ್ನನ್ನು ಗರ್ಭದಿಂದ ಏಕೆ ಹೊರದೆಗೆದಿ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಾಯ ಗರ್ಭದಿಂದ ನನ್ನನ್ನೇಕೆ ಹೊರತೆಗೆದೆ? ನಾನು ಸತ್ತುಹೋಗಬಹುದಿತ್ತು ಯಾರೂ ನೋಡುವುದಕ್ಕೆ ಮುಂಚೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತುಹೋಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ? ಯಾರೂ ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:18
9 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.


ಆಗ ಇಲ್ಲದವನಾಗಿರುತ್ತಿದ್ದೆನು. ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.


ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು