Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:4 - ಕನ್ನಡ ಸತ್ಯವೇದವು J.V. (BSI)

4 ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರೇ, ನಿನಗೆ ಮನುಷ್ಯರ ಕಣ್ಣುಗಳಿವೆಯೋ? ಮನುಷ್ಯರು ನೋಡುವಂತೆ ನೀನು ನೋಡುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:4
7 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು.


ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ?


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ಆತನೊಬ್ಬನೇ ಭೂವಿುಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು