Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:8 - ಕನ್ನಡ ಸತ್ಯವೇದವು J.V. (BSI)

8 ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ ಈಗ ಮನಸ್ಸು ಬೇರೆ ಮಾಡಿಕೊಂಡು ನನ್ನನ್ನು ನಾಶನ ಮಾಡಿಬಿಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶಮಾಡುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:8
14 ತಿಳಿವುಗಳ ಹೋಲಿಕೆ  

ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?


ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಕೃಪೆಯು ಶಾಶ್ವತವಾದದ್ದು; ನೀನು ಕೈಹಚ್ಚಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.


ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು; ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.


ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು