Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವದು, ಕತ್ತಲಿದ್ದರೂ ಬೆಳಗಿನಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಜೀವಿತವು ಮಧ್ಯಾಹ್ನದ ಸೂರ್ಯನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವುದು. ನಿನ್ನ ಜೀವಿತದ ಕಾರ್ಗತ್ತಲೆಯ ತಾಸುಗಳು ಮುಂಜಾನೆಯ ಸೂರ್ಯನಂತೆ ಹೊಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:17
17 ತಿಳಿವುಗಳ ಹೋಲಿಕೆ  

ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನಂದರೆ - ನಮ್ಮ ಪಿತೃವಾಗಿರುವ ಇಸ್ರಾಯೇಲನ ದೇವರೇ, ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ನಿರೀಕ್ಷೆಗೆ ಆಸ್ಪದವಿರುವದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರವಿುಸಿಕೊಳ್ಳುವಿ.


ಆಗ ನೀನು ಸರ್ವಶಕ್ತನಲ್ಲಿ ಆನಂದಪಟ್ಟು ದೇವರ ಕಡೆಗೆ ಮುಖವನ್ನು ಎತ್ತಿಕೊಳ್ಳುವಿ.


ಯಾವದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವದು.


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು