Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:2 - ಕನ್ನಡ ಸತ್ಯವೇದವು J.V. (BSI)

2 ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಮಾತುಗಳ ಈ ಪ್ರವಾಹಕ್ಕೆ ಯಾರಾದರೊಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:2
11 ತಿಳಿವುಗಳ ಹೋಲಿಕೆ  

ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.


ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವದಕ್ಕೆ ಉರ್ಲೊಡ್ಡುತ್ತಿರುವಿ? ನೀನು ಆಲೋಚಿಸು, ಆಮೇಲೆ ಮಾತಾಡೋಣ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಚಾಡಿಗಾರನು ದೇಶದಲ್ಲಿ ಉಳಿಯನು; ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವದು.


ಒಣಮಾತುಗಳಿಗೆ ಪಾರವಿಲ್ಲವೋ? ಯಾವ ನೋವಿನಿಂದ ಈ ಉತ್ತರ ಕೊಟ್ಟಿ?


ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೂ ಹೀಗೆ ನುಡಿಯುತ್ತಿರುವಿ?


ಆಗ ನಾಮಾಥ್ಯನಾದ ಚೋಫರನು ಹೀಗೆಂದನು -


ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?


ಕನಸು ಬಹು ಪ್ರಯಾಸದಿಂದಲೂ ಉಂಟಾಗುತ್ತದೆ, ಮೂಢನ ಧ್ವನಿಯು ಬಹು ಮಾತುಗಳಿಂದಲೂ ಕೂಡಿದ್ದಾಗಿದೆ.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು