Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಬೋಧೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ ಎಂದು ನೀನು ಹೇಳಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಬನೇ, ನೀನು ದೇವರಿಗೆ, ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:4
11 ತಿಳಿವುಗಳ ಹೋಲಿಕೆ  

ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ಆಗ ನಾನು ಆದರಣೆ ಹೊಂದಿ ವಿುತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಸದಮಲಸ್ವಾವಿುಯ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


[ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ಆಹಾ, ದೇವರು ಬಾಯ್ದೆರೆದು ನಿನಗೆ ವಿರುದ್ಧವಾಗಿ ಮಾತಾಡಿದರೆ ಎಷ್ಟೋ ಉತ್ತಮ!


ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು