Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:19 - ಕನ್ನಡ ಸತ್ಯವೇದವು J.V. (BSI)

19 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:19
16 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನುಳಿಯುವದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.


ನನ್ನ ಘನತೆಯನ್ನು ಸುಲಿದುಬಿಟ್ಟು ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.


ದುಷ್ಟರು ಬಾಳಿ ವೃದ್ಧರಾಗುವದಕ್ಕೂ ಇದಲ್ಲದೆ ಪ್ರಬಲಿಸುವದಕ್ಕೂ ಕಾರಣವೇನು?


ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ.


ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲೇ ಸಾಯುವರು, ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು