Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:2 - ಕನ್ನಡ ಸತ್ಯವೇದವು J.V. (BSI)

2 ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವದು, ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 :ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:2
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!


ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.


ಏಕೆಂದರೆ ನನಗೆ ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.


ಆದರೆ ನೀವೆಲ್ಲರೂ ಮತ್ತೆ ವಿವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆ.


ವಿವೇಕವು ಪ್ರವೇಶಿಸದಂತೆ ಅವರ ಹೃದಯವನ್ನು ಮುಚ್ಚಿಬಿಟ್ಟಿದ್ದೀಯಲ್ಲಾ. ಇಂಥವರನ್ನು ಉನ್ನತಸ್ಥಿತಿಗೆ ತಂದೀಯಾ?


ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?


ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಜಳ್ಳುಮನುಷ್ಯನು ಬುದ್ಧಿಯನ್ನು ಪಡೆದಾನು.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ?


ಆಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು -


ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಎಷ್ಟೋ ಧಾರಾಳವಾಗಿ ಉಪದೇಶಿಸಿದ್ದೀ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು