Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:25 - ಕನ್ನಡ ಸತ್ಯವೇದವು J.V. (BSI)

25 ಅವರು ಬೆಳಕಿಲ್ಲದ ಕತ್ತಲಲ್ಲಿ ತಡವಾಡುವರು. ಅವರನ್ನು ಅಮಲೇರಿದವರಂತೆ ಓಲಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ಬೆಳಕಿಲ್ಲದೆ ಕತ್ತಲೆಯಲ್ಲಿ ತಡವಾಡುವರು. ಆತನು ಅವರನ್ನು ಅಮಲೇರಿದವರಂತೆ ಅಲೆದಾಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾಯಕರು ಬೆಳಕು ಇಲ್ಲದ ಕತ್ತಲೆಯಲ್ಲಿ ತಡಕಾಡುವಂತೆಯೂ ಅವರು ಮತ್ತೇರಿದವರಂತೆ ದಿಗ್ಭ್ರಮೆಗೊಳಿಸುವಂತೆಯೂ ಮಾಡಲು ದೇವರು ಶಕ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:25
10 ತಿಳಿವುಗಳ ಹೋಲಿಕೆ  

ಅವರು ಹಗಲಿನಲ್ಲಿ ಕತ್ತಲೆಗೊಳಗಾಗಿ ಮಧ್ಯಾಹ್ನದಲ್ಲೂ ರಾತ್ರಿಯಲ್ಲಿರುವಂತೆ ತಡವಾಡುತ್ತಾರೆ.


ಅವರು ದಿಕ್ಕುತೋರದವರಾಗಿ ಸುತ್ತುತ್ತಾ ಕುಡಿಕರಂತೆ ಹೊಯ್ದಾಡುತ್ತಿದ್ದರು.


ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.


ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು.


ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು.


ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವದು, ಅವನ ಮೇಲಣ [ತೂಗು] ದೀವಿಗೆಯು ನಂದುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು