Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:4 - ಕನ್ನಡ ಸತ್ಯವೇದವು J.V. (BSI)

4 ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:4
26 ತಿಳಿವುಗಳ ಹೋಲಿಕೆ  

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ.


ತಾಳಿರಿ, ನಾನೂ ಮಾತಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.


ಆತನು ನನ್ನನ್ನು ಅನ್ಯದೇಶದವರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾನೆ, ಜನರ ಉಗುಳಾಟಕ್ಕೆ ನನ್ನ ಮುಖವು ಗುರಿಯಾಗಿದೆ.


ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ.


ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರಕೊಂಡು ಹೋಗಿ ಅವಳ ಕೈಹಿಡಿದು -


ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು; ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.


ದೋಸೆಗೋಸ್ಕರ ಗೇಲಿಮಾಡುವ ಮೂರ್ಖರ ಸಂಗಡ ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತಾಡುವಾಗ ನಿನ್ನನ್ನು ಯಾರೂ ನಾಚಿಕೆಪಡಿಸಕೂಡದೋ?


ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು.


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತೃಣೀಕರಿಸುತ್ತೇನೆ.


ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬದು ನೆಮ್ಮದಿಯಿಂದಿರುವವನ ಯೋಚನೆ;


ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬದಾಗಿ ನಿರ್ಣಯವಾಗುವದೆಂದು ನನಗೆ ಗೊತ್ತೇ ಇದೆ.


ಈಗಲಾದರೋ ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು. ಮತ್ತು ಅವರ ಗಾದೆಗಳಿಗೆ ಆಸ್ಪದವಾಗಿದ್ದೇನೆ.


ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು