Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:19 - ಕನ್ನಡ ಸತ್ಯವೇದವು J.V. (BSI)

19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:19
13 ತಿಳಿವುಗಳ ಹೋಲಿಕೆ  

ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬದೇ ನನ್ನ ಆಶೆ.


ನನಗೆ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವದಕ್ಕೆ ನಿಜವಾಗಿ ಇಷ್ಟಪಡುವಿರೋ?


ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತಾಡಬೇಕು, ನನಗೇನಾದರೂ ಆಗಲಿ.


ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ ಈಗ ಮನಸ್ಸು ಬೇರೆ ಮಾಡಿಕೊಂಡು ನನ್ನನ್ನು ನಾಶನ ಮಾಡಿಬಿಡುವಿಯಾ?


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಆತನೊಂದಿಗೆ ವ್ಯಾಜ್ಯವಾಡಬೇಕೆಂದು ಇಷ್ಟಪಟ್ಟರೂ ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.


ಆದರೆ ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಳ್ಳದಂತೆ ಈ ಎರಡು ಕಾರ್ಯಗಳನ್ನು ಮಾಡಬೇಡ.


ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು