Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:25 - ಕನ್ನಡ ಸತ್ಯವೇದವು J.V. (BSI)

25 ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗಾಳಿಗೆ ತೂರುವ ತರಗೆಲೆಯನ್ನು ಬೆದರಿಸುವೆಯಾ? ಒಣಗಿದ ಹೊಟ್ಟನ್ನು ಬೆನ್ನಟ್ಟಿಹೋಗುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಗಾಳಿಯಿಂದ ಹಾರಿಹೋಗುವ ಎಲೆಯನ್ನು ತೊಂದರೆಪಡಿಸುವಿರೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:25
7 ತಿಳಿವುಗಳ ಹೋಲಿಕೆ  

ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸರ್ತಿ? ಎಷ್ಟಾವರ್ತಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!


ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?


ಇಸ್ರಾಯೇಲ್ಯರ ಅರಸೇ, ಯಾರನ್ನು ಹಿಂದಟ್ಟ ಹೊರಟಿದ್ದೀ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೇ, ಒಂದು ಬಡ ಸೊಳ್ಳೆಯನ್ನೇ.


ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ತಿಂದು ತಿಂದು ನಿಮಗೆ ಸಾಕಾಗಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು