Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:3 - ಕನ್ನಡ ಸತ್ಯವೇದವು J.V. (BSI)

3 ಆದರೆ ನಾನು ಸರ್ವಶಕ್ತನ ಸಂಗಡ ಮಾತಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:3
14 ತಿಳಿವುಗಳ ಹೋಲಿಕೆ  

ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ.


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತಾಡುವೆ, ನೀನು ಉತ್ತರ ಕೊಡು.


ಆತನೊಂದಿಗೆ ವ್ಯಾಜ್ಯವಾಡಬೇಕೆಂದು ಇಷ್ಟಪಟ್ಟರೂ ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ಆಹಾ, ದೇವರು ಬಾಯ್ದೆರೆದು ನಿನಗೆ ವಿರುದ್ಧವಾಗಿ ಮಾತಾಡಿದರೆ ಎಷ್ಟೋ ಉತ್ತಮ!


[ಈ ಸಂದರ್ಭದಲ್ಲಿ] ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು