Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:4 - ಕನ್ನಡ ಸತ್ಯವೇದವು J.V. (BSI)

4 ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:4
23 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ.


ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.


ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಆದರಣೆಯವರಾಗಿದ್ದೀರಿ.


ಈಗ ನೀವು ಹಾಗೆಯೇ ಇದ್ದೀರಿ. [ನನ್ನ] ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಅದಕ್ಕೆ - ನೀನು ಬರೆದಂಥದು ಏನೂ ನಡೆದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿದ್ದಿ ಎಂದು ಹೇಳಿ ಕಳುಹಿಸಿದೆನು.


ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.


ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.


ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಹೀಗಾದರೂ ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು