Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:5 - ಕನ್ನಡ ಸತ್ಯವೇದವು J.V. (BSI)

5 ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:5
24 ತಿಳಿವುಗಳ ಹೋಲಿಕೆ  

ಯೆಹೋವನೇ, ನನಗೆ ಅವಸಾನವುಂಟೆಂದೂ ನನ್ನ ಜೀವಮಾನವು ಅತ್ಯಲ್ಪವೆಂದೂ ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಕೊಳ್ಳಲು ಅವು ಸತ್ತು ತಿರಿಗಿ ಮಣ್ಣಿಗೆ ಸೇರುತ್ತವೆ.


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ;


ಜಲರಾಶಿಗಳು ಬಂದು ಪುನಃ ಭೂವಿುಯನ್ನು ಮುಚ್ಚಿಕೊಳ್ಳದ ಹಾಗೆ ನೀನು ಮೇರೆಯನ್ನು ಗೊತ್ತುಮಾಡಿದಿ.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು;


ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ವಾಯಿದೆಯುಂಟಲ್ಲವೇ. ಅವನ ದಿನಗಳು ಕೂಲಿಯವನ ದಿನಗಳಂತೆ ಕಳೆಯುತ್ತವೆ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.


ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು; ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.


ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,


ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ನಾನು ಹಿಂದಿರುಗದ ದಾರಿಯನ್ನು ಕೆಲವು ವರುಷಗಳೊಳಗೇ ಹಿಡಿಯುವೆನಲ್ಲವೆ.


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು