Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:7 - ಕನ್ನಡ ಸತ್ಯವೇದವು J.V. (BSI)

7 ಕಡಿದ ಮರವೂ ತಾನು ಮೊಳೆಯುವದನ್ನು ನಿಲ್ಲಿಸದೆ ಮತ್ತೆ ಚಿಗುರೇನೆಂದು ನಿರೀಕ್ಷಿಸುತ್ತದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮತ್ತೆ ಮೊಳೆಯುವೆನೆಂಬ, ಮರಳಿ ಚಿಗುರುವೆನೆಂಬ ನಂಬಿಕೆಯಿಂದಿದೆ ಅಲ್ಲವೆ ಕಡಿದ ವಟವೃಕ್ಷ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸ ಕವಲುಗಳನ್ನು ಮೊಳೆಯಿಸುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಮರಕ್ಕೆ ಸಹ ಒಂದು ನಿರೀಕ್ಷೆ ಇದೆ: ಅದೇನೆಂದರೆ, ಮರವನ್ನು ಕಡಿದು ಹಾಕಿದರೂ ತಾನು ಮತ್ತೆ ಚಿಗುರುವೆನೆಂಬ ನಿರೀಕ್ಷೆ ಅದಕ್ಕಿದೆ; ಚಿಗುರುವುದನ್ನು ಆ ಮರವು ನಿಲ್ಲಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:7
10 ತಿಳಿವುಗಳ ಹೋಲಿಕೆ  

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು;


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂವಿುಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ;


ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.


ನೆಲದಲ್ಲಿ ಅದರ ಬುಡವು ಮುದಿಯಾದರೂ, ಮಣ್ಣಿನಲ್ಲಿ ಬೇರು ಸತ್ತರೂ,


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಅದರಿಂದ ಎಲ್ಲಕ್ಕೂ ಆಹಾರ, ನೆರಳು ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು