Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:11 - ಕನ್ನಡ ಸತ್ಯವೇದವು J.V. (BSI)

11 ದೇವರ ಆದರಣೆಗಳೂ ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೇವಲವಾಯಿತೋ ನಿನಗೆ ದೇವರಿತ್ತ ಸಾಂತ್ವನ? ನಿನಗೆ ದೊರೆತ ಮೃದುವಾದ ಹಿತವಚನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಸಂತೈಸುವಿಕೆಗಳೂ ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:11
12 ತಿಳಿವುಗಳ ಹೋಲಿಕೆ  

ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.


ದೇವರ ಆಲೋಚನಾಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದಿಯೇನೋ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?


ನೀವು ತಿಳಿದಿರುವದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ಆಗ ನಾನು ಆದರಣೆ ಹೊಂದಿ ವಿುತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಸದಮಲಸ್ವಾವಿುಯ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು