Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:2 - ಕನ್ನಡ ಸತ್ಯವೇದವು J.V. (BSI)

2 ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:2
11 ತಿಳಿವುಗಳ ಹೋಲಿಕೆ  

ಬರೀ ಮಾತುಗಳನ್ನು ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೆ?


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೂ ಹೀಗೆ ನುಡಿಯುತ್ತಿರುವಿ?


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ನೀವು ತಿಳಿದಿರುವದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.


ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗಂದನು -


ಪ್ರಯೋಜನವಿಲ್ಲದ ನುಡಿಯಿಂದಲೂ ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವದು ಯುಕ್ತವೋ?


ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವದು.


ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿಹೋಗುವನು; ಅವನು ಪ್ರಯಾಸಪಟ್ಟದ್ದಕ್ಕೆಲ್ಲಾ ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗನು.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು