Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:22 - ಕನ್ನಡ ಸತ್ಯವೇದವು J.V. (BSI)

22 ಕತ್ತಲೊಳಗಿಂದ ತಾನು ಹಿಂದಿರುಗುವೆನೆಂಬ ನಂಬಿಕೆಯಿಲ್ಲದೆ ಕತ್ತಿಯು ತನಗಾಗಿ ಕಾದಿದೆ ಎಂಬದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; ಅವನ ಖಡ್ಗವು ಅವನಿಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:22
12 ತಿಳಿವುಗಳ ಹೋಲಿಕೆ  

ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು;


ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.


ನಾನು ಕರೆಸಿದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವದೇಕೆ?


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ರೊಟ್ಟಿ ಎಲ್ಲಿ ಎಂದು ಹುಡುಕುತ್ತಾ ಅಲೆದಾಡುವೆನೆಂಬದಾಗಿಯೂ ನಿಶ್ಚಯಿಸಿಕೊಂಡು ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.


ಕತ್ತಲೊಳಗಿಂದ ಅವನು ಪಾರಾಗುವದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವದು, ದೇವರ ಬಾಯ ಶ್ವಾಸದಿಂದ ಬಡಿಸಿಕೊಂಡು ಹೋಗುವನು.


ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು ಅವನ ಜೀವವನ್ನು ದೈವಾಸ್ತ್ರದಿಂದ ಅಳಿದುಹೋಗದ ಹಾಗೆ ನಿಲ್ಲಿಸುವನು.


ಕೇಳದಿದ್ದರೆ ದೈವಾಸ್ತ್ರದಿಂದ ಅಳಿದು ಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು