Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:29 - ಕನ್ನಡ ಸತ್ಯವೇದವು J.V. (BSI)

29 ಇಂಥವನು ಐಶ್ವರ್ಯವಂತನಾಗುವದಿಲ್ಲ, ಅವನ ಆಸ್ತಿಯು ನಿಲ್ಲುವದಿಲ್ಲ, ಅವನ ಫಲವು ಭಾರದಿಂದ ಭೂವಿುಯ ಕಡೆಗೆ ಬಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:29
11 ತಿಳಿವುಗಳ ಹೋಲಿಕೆ  

ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.


ಏನೂ ವಿುಗದಂತೆ ಅವನು ನುಂಗಿಬಿಟ್ಟದರಿಂದ ಅವನ ಸುಖವು ಅಸ್ಥಿರವಾಗಿರುವದು.


ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವದು, ಅವನ ಮೇಲಣ [ತೂಗು] ದೀವಿಗೆಯು ನಂದುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು