Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:15 - ಕನ್ನಡ ಸತ್ಯವೇದವು J.V. (BSI)

15 ಗೋಣಿಯನ್ನು ಹೊಲಿದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ದೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ಬಹು ದುಃಖಿತನಾಗಿದ್ದೇನೆ; ಗೋಣಿತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆನೆಂದು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾನು ಗೋಣಿತಟ್ಟು ಹೊಲಿದು ನನ್ನ ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಗೌರವವನ್ನು ಧೂಳಿನಲ್ಲಿ ಮರೆಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:15
12 ತಿಳಿವುಗಳ ಹೋಲಿಕೆ  

ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.


ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣವೈರಿಯನ್ನೂ ರಕ್ಷಿಸಿದೆನಲ್ಲಾ. ಸೆಲಾ.


ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿರಿ ಎಂದು ಹೇಳುವೆನು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.


ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ಭಕ್ತರ ಕೊಂಬುಗಳು ಎತ್ತಲ್ಪಡುವವು.


ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ದೂಳುಬೂದಿಗಳಿಗೆ ಸಮಾನನಾಗಿದ್ದೇನೆ.


ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ನನ್ನ ಘನತೆಯನ್ನು ಸುಲಿದುಬಿಟ್ಟು ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.


ನಾನು ಗೋಣೀತಟ್ಟು ಕಟ್ಟಿಕೊಂಡದ್ದು ಅವರ ಗಾದೆಗೆ ಆಸ್ಪದವಾಯಿತು.


ಒಂದು ವೇಳೆ ಸುಗತಿಯಾದೀತೆಂದು ತನ್ನ ಬಾಯಿಯನ್ನು ದೂಳಿಗೆ ಮುಟ್ಟಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು