Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:19 - ಕನ್ನಡ ಸತ್ಯವೇದವು J.V. (BSI)

19 ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಗಲೂ ಸಹ, ನನಗೆ ಸಾಕ್ಷಿ ನೀಡುವಾತನು ಪರಲೋಕದಲ್ಲಿದ್ದಾನೆ. ನನಗೆ ಬೆಂಬಲ ನೀಡುವಾತನು ಮೇಲೋಕದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:19
16 ತಿಳಿವುಗಳ ಹೋಲಿಕೆ  

ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ನಮ್ಮ ಯೆಹೋವದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ


ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ,


ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ಭೂವಿುಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!


ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು;


ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವದು?


ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವದು. ಪರಲೋಕದ ಸಾಕ್ಷಿ ಸತ್ಯವೇ ಸರಿ. ಸೆಲಾ.


ಯಾಹುವಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ; ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು