Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:22 - ಕನ್ನಡ ಸತ್ಯವೇದವು J.V. (BSI)

22 ನಾನು ಹಿಂದಿರುಗದ ದಾರಿಯನ್ನು ಕೆಲವು ವರುಷಗಳೊಳಗೇ ಹಿಡಿಯುವೆನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯಾಕೆಂದರೆ ನಾನು ಮರಳಿ ಬರಲಾಗದ ಸ್ಥಳಕ್ಕೆ ಇನ್ನು ಕೆಲವೇ ವರ್ಷಗಳಲ್ಲಿ ಹೊರಟುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾನು ಹಿಂದಿರುಗಿ ಬಾರದ ದಾರಿಯನ್ನು ಹಿಡಿಯಲು, ಇನ್ನೂ ಕೆಲವೇ ವರ್ಷಗಳು ಉಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:22
9 ತಿಳಿವುಗಳ ಹೋಲಿಕೆ  

ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!


ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು;


ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ.


ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ನಾನು ಅಂಧಕಾರದಿಂದಲೂ ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರಿಗಿ ಬರಲಾರೆನು.


ನನ್ನ ನ್ಯಾಯವನ್ನು ದೇವರ ಮುಂದೆಯೂ ಮಾನವನ ನ್ಯಾಯವನ್ನು ಅವನ ವಿುತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೇನೇ ಕಣ್ಣೀರು ಸುರಿಸುತ್ತೇನೆ.


ನನ್ನ ಆತ್ಮವು ಒಡೆದುಹೋಗಿದೆ, ನನ್ನ ದಿನಗಳು ಮುಗಿದಿವೆ, ಗೋರಿಯು ನನಗೆ ಕಾದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು