Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:7 - ಕನ್ನಡ ಸತ್ಯವೇದವು J.V. (BSI)

7 ಈಗಲಂತು ಆತನು ನನ್ನನ್ನು ಕುಂದಿಸಿದ್ದಾನೆ; [ದೇವಾ,] ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವರೇ, ದುಃಖದಿಂದ ನೀ ನನ್ನನ್ನು ಸವೆಸಿರುವೆ ನನ್ನ ಬಂಧುಬಳಗದವರನ್ನು ಸದೆಬಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನೀನು ನನ್ನನ್ನು ನಿಶ್ಯಕ್ತನನ್ನಾಗಿ ಮಾಡಿರುವೆ. ನನ್ನ ಇಡೀ ಕುಟುಂಬವನ್ನು ನಾಶ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರೇ, ನೀವು ನನ್ನನ್ನು ಬಲಹೀನಪಡಿಸಿದ್ದೀರಿ; ನೀವು ನನ್ನ ಕುಟುಂಬದವರನ್ನೆಲ್ಲಾ ಇಲ್ಲದಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:7
13 ತಿಳಿವುಗಳ ಹೋಲಿಕೆ  

ಬೇಸರಿಕೆಯ ಮಾಸಗಳೂ ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.


ಆದಕಾರಣ, [ಯೆರೂಸಲೇಮೇ,] ನಿನಗೆ ಕ್ರೂರವಾದ ಪೆಟ್ಟುಹಾಕುವೆನು. ನಿನ್ನ ಪಾಪಗಳ ನಿವಿುತ್ತ ನಿನ್ನನ್ನು ಹಾಳುಮಾಡುವೆನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.


ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ,


ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು