Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:9 - ಕನ್ನಡ ಸತ್ಯವೇದವು J.V. (BSI)

9 ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲುಕಡಿದಿದ್ದಾನೆ; ನನ್ನ ವಿರೋಧಿಯು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣಮಾಡಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ದೇವರು ಕೋಪದಿಂದ ನನ್ನ ದೇಹವನ್ನು ಸೀಳಿಹಾಕುತ್ತಿದ್ದಾನೆ. ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ; ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ತಮ್ಮ ಬೇಸರದಲ್ಲಿ ನನ್ನನ್ನು ದಂಡಿಸಿದ್ದಾರೆ; ನನ್ನ ದೇವರು ನನ್ನ ಮೇಲೆ ಅತೃಪ್ತರಾಗಿದ್ದಾರೆ; ನನ್ನ ವೈರಿಯು ನನ್ನನ್ನು ದ್ವೇಷದಿಂದ ನೋಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:9
17 ತಿಳಿವುಗಳ ಹೋಲಿಕೆ  

ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ದೋಸೆಗೋಸ್ಕರ ಗೇಲಿಮಾಡುವ ಮೂರ್ಖರ ಸಂಗಡ ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ನೀನು ವಿಮುಖನಾಗಿ ನನ್ನನ್ನು ಶತ್ರುವೆಂದೆಣಿಸಿರುವದೇಕೆ?


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.


ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರಗಬೇಕೋ?


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ನಾನು ಎಫ್ರಾಯೀವಿುಗೆ ಸಿಂಹವೂ ಯೆಹೂದಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ಎತ್ತಿಕೊಂಡು ಒಯ್ಯಲು ಯಾರೂ ಬಿಡಿಸರು.


ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ನೀನು ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿದ್ದೀ; ನನ್ನ ದಾರಿಗಳನ್ನೆಲ್ಲಾ ಮಂದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದೀ.


ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದೀ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತೀ.


ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು ಕಂಡುಹಿಡಿಯುತ್ತಾ ನನ್ನನ್ನು ಶತ್ರುವೆಂದೆಣಿಸಿಕೊಂಡಿದ್ದಾನೆ;


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು