Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:15 - ಕನ್ನಡ ಸತ್ಯವೇದವು J.V. (BSI)

15 ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ನಂಬಿಕೆ-ನಿರೀಕ್ಷೆ ಎಲ್ಲಿಯದು? ನನ್ನ ಭಾಗ್ಯವನ್ನು ಯಾರು ನೋಡಿಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನಗೆ ನಿರೀಕ್ಷೆಯೇ ಇಲ್ಲ. ನನ್ನ ನಿರೀಕ್ಷೆಯನ್ನು ಯಾರೂ ನೋಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:15
9 ತಿಳಿವುಗಳ ಹೋಲಿಕೆ  

ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವದೇಕೆ?


ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ,


ನನ್ನ ದಿವಸಗಳು ಮಗ್ಗದ ಲಾಳಿಗಿಂತ ವೇಗವಾಗಿ ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.


[ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.


ಅಯ್ಯೋ, ನನ್ನ ಶಕ್ತಿಯು ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯು ವ್ಯರ್ಥ ಅಂದುಕೊಂಡೆನು.


ನೀರು ಕಲ್ಲುಗಳನ್ನು ಸವೆಯಿಸುವದು, ಜಲಪ್ರವಾಹಗಳು ಭೂವಿುಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು