Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:16 - ಕನ್ನಡ ಸತ್ಯವೇದವು J.V. (BSI)

16 ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ದೂಳಿಗೆ ಸೇರೇವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ? ನಾವು ಒಟ್ಟಾಗಿ ಧೂಳಿಗೆ ಇಳಿದುಹೋಗುತ್ತೇವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:16
14 ತಿಳಿವುಗಳ ಹೋಲಿಕೆ  

ಪರ್ವತಗಳ ಬುಡದ ತನಕ ಇಳಿದೆನು, ಭೂಲೋಕದ ಅಗುಳಿಗಳು ಎಂದಿಗೂ ತೆಗೆಯದ ಹಾಗೆ ನನ್ನ ಹಿಂದೆ ಹಾಕಲ್ಪಟ್ಟವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿಂದ ಉದ್ಧರಿಸಿದಿ.


ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ನನ್ನ ದಿವಸಗಳು ಮಗ್ಗದ ಲಾಳಿಗಿಂತ ವೇಗವಾಗಿ ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.


ಮೋಡ ಹರಿದು ಮಾಯವಾಗುವಂತೆ ಪಾತಾಳಕ್ಕೆ ಇಳಿದು ಹೋದವನು ತಿರಿಗಿ ಬರುವದಿಲ್ಲ.


ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗಂದನು -


ಆ ತಗ್ಗಿನ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು