Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:3 - ಕನ್ನಡ ಸತ್ಯವೇದವು J.V. (BSI)

3 ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಓ ದೇವರೇ, ನೀನೆ ನನಗೆ ಈಡು ಕೊಡುವವನು ನಿನ್ನನ್ನು ಬಿಟ್ಟರೆ ನನಗಿಲ್ಲ ಒಪ್ಪಂದಮಾಡುವವರಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ದೇವರೇ, ಕೃಪೆ ತೋರಿ ನಾನು ನಿರಪರಾಧಿಯೆಂಬುದಕ್ಕೆ ನೀನೇ ನನಗೆ ಜಾಮೀನಾಗು. ನಾನು ನಿರಪರಾಧಿ ಎಂಬುದಕ್ಕೆ ಜಾಮೀನಾಗಲು ಯಾರೂ ಒಪ್ಪುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ; ನಿಮ್ಮನ್ನು ಬಿಟ್ಟು ಯಾರು ನನಗೆ ಭದ್ರತೆಯನ್ನು ಕೊಡುವವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:3
12 ತಿಳಿವುಗಳ ಹೋಲಿಕೆ  

ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.


ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ಹೆರರಿಗೆ ಹೊಣೆಯಾದರೆ ಹಾನಿ; ಹೊಣೆಗೆ ಅಸಹ್ಯಪಟ್ಟರೆ ನಿರ್ಭಯ.


ನಿನ್ನ ಸೇವಕನ ಮೇಲಿಗಾಗಿ ಹೊಣೆಗಾರನಾಗು; ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.


ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ - ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದಿದ್ದರೆ ತಂದೆಗೆ ತಪ್ಪಿದವನ ದೋಷ ಎಂದೆಂದಿಗೂ ನನಗಿರಲಿ ಎಂದು ಮಾತು ಕೊಟ್ಟೆನು.


ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.


ನವ್ಮಿುಬ್ಬರ ಮೇಲೆ ಕೈಯಿಡುವವನಾಗಿಯೂ ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.


ಕೈಮೇಲೆ ಕೈ ಹಾಕಿ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನೂ ಒಬ್ಬನಾಗಬೇಡ.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ; ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.


ನೆರೆಯವನಿಗಾಗಿ ಕೈ ಮೇಲೆ ಕೈ ಹಾಕಿ ಹೊಣೆಯಾದವನು ಬುದ್ಧಿಹೀನನೇ ಸರಿ.


ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.


ನೀನು ಕೂಗಿದರೆ ನಿನಗೆ ಉತ್ತರಕೊಡುವವರುಂಟೋ? ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು