Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:4 - ಕನ್ನಡ ಸತ್ಯವೇದವು J.V. (BSI)

4 ವಿವೇಕವು ಪ್ರವೇಶಿಸದಂತೆ ಅವರ ಹೃದಯವನ್ನು ಮುಚ್ಚಿಬಿಟ್ಟಿದ್ದೀಯಲ್ಲಾ. ಇಂಥವರನ್ನು ಉನ್ನತಸ್ಥಿತಿಗೆ ತಂದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜ್ಞಾನ ಪ್ರವೇಶಿಸದಂತೆ ನೀ ಅವರ ಮನಸ್ಸನು ಮುಚ್ಚಿರುವೆ ಹೀಗೆ ಅವರು ಜಯಶೀಲರಾಗದಂತೆ ತಡೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿಬಿಟ್ಟಿರುವೆ; ಅವರು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ಜಯವಾಗದಂತೆ ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:4
10 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು.


ಯಾವನು ಸ್ವಲಾಭಕ್ಕಾಗಿ ವಿುತ್ರರ ಮೇಲೆ ದೂರು ಹೊರಿಸುವನೋ ಅವನ ಮಕ್ಕಳು ಕಂಗೆಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು