Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:5 - ಕನ್ನಡ ಸತ್ಯವೇದವು J.V. (BSI)

5 ಯಾವನು ಸ್ವಲಾಭಕ್ಕಾಗಿ ವಿುತ್ರರ ಮೇಲೆ ದೂರು ಹೊರಿಸುವನೋ ಅವನ ಮಕ್ಕಳು ಕಂಗೆಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:5
12 ತಿಳಿವುಗಳ ಹೋಲಿಕೆ  

ಚಾಡಿಕೋರನು ಗುಟ್ಟು ರಟ್ಟುಮಾಡುವನು; ಆದದರಿಂದ ತುಟಿಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.


ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.


ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವದಿಲ್ಲ.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು