Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:6 - ಕನ್ನಡ ಸತ್ಯವೇದವು J.V. (BSI)

6 ಆತನು ನನ್ನನ್ನು ಅನ್ಯದೇಶದವರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾನೆ, ಜನರ ಉಗುಳಾಟಕ್ಕೆ ನನ್ನ ಮುಖವು ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ನನ್ನನು ಈಡಾಗಿಸಿದ್ದಾನೆ ಅನ್ಯರ ಕಟ್ಟುಗಾದೆಗೆ ನನ್ನ ಮುಖ ಗುರಿಯಾಗಿದೆ ಜನರ ಉಗುಳಾಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:6
11 ತಿಳಿವುಗಳ ಹೋಲಿಕೆ  

ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ.


ಈಗಲಾದರೋ ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು. ಮತ್ತು ಅವರ ಗಾದೆಗಳಿಗೆ ಆಸ್ಪದವಾಗಿದ್ದೇನೆ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಬಂದಿ? ನನಗೆ ತಿಳಿಸಿದ್ದರೆ ನಾನು ಸಂಗೀತಮಾಡಿಸಿ ಮದ್ದಳೆ, ವೀಣೆ ಮುಂತಾದ ವಾದ್ಯಗಳೊಡನೆ ಸಂತೋಷದಿಂದ ನಿನ್ನನ್ನು ಸಾಗಕಳುಹಿಸುತ್ತಿದ್ದೆನು.


ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.


ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ.


ನನಗೆ ಅಸಹ್ಯಪಟ್ಟು ದೂರ ನಿಂತು ನನ್ನ ಮೇಲೆ ಉಗುಳುವದಕ್ಕೂ ಹಿಂದೆಗೆಯರು.


ನಾನು ಗೋಣೀತಟ್ಟು ಕಟ್ಟಿಕೊಂಡದ್ದು ಅವರ ಗಾದೆಗೆ ಆಸ್ಪದವಾಯಿತು.


ದೂಷಕರ ನಿಂದಾವಚನಗಳಿಂದಲೂ ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು