Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:11 - ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:11
22 ತಿಳಿವುಗಳ ಹೋಲಿಕೆ  

ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.


ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಬರುವದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ನೆಲದ ಮೇಲೆ ಪಾಶವೂ ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವವು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ಬೆಪ್ಪಾದರು.


ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಾದನು.


ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.


ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು