Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:15 - ಕನ್ನಡ ಸತ್ಯವೇದವು J.V. (BSI)

15 ಅವನಿಗೆ ಸಂಬಂಧಿಗಳಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:15
16 ತಿಳಿವುಗಳ ಹೋಲಿಕೆ  

ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.


ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ -


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ


ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋವಿುನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳುಕೊಳ್ಳನು.


ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದರಿಂದ ನೀವು ನಾಶವಾಗಿ ಹೋಗುವಿರಿ.


ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟುಹಾಕುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು