Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:21 - ಕನ್ನಡ ಸತ್ಯವೇದವು J.V. (BSI)

21 ಕೆಡುಕರ ನಿವಾಸಗಳ ಅವಸ್ಥೆಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೇಡಿಗರ ನಿವಾಸಗಳ ಗತಿ ಹೀಗೆಯೇ ದೇವರನು ಅಲಕ್ಷಿಸುವವನ ಸ್ಥಿತಿ ಇದುವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:21
16 ತಿಳಿವುಗಳ ಹೋಲಿಕೆ  

ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ನಿನ್ನನ್ನು ಅರಿಯದ ಮ್ಲೇಚ್ಫರ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.


ಪ್ರಧಾನನ ಮನೆ ಏನಾಯಿತು, ದುಷ್ಟರು ವಾಸಿಸಿದ ಗುಡಾರವೆಲ್ಲಿ, ಅನ್ನುತ್ತೀರಷ್ಟೆ.


ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಅವರ ಗುಡಾರದ ಹಗ್ಗವು ಬಿಚ್ಚಿ ಹೋಗುವದಷ್ಟೆ, ಜ್ಞಾನವಿಲ್ಲದವರಾಗಿ ಸಾಯುವರು ಎಂಬದೇ.


ಆಗ ಯೋಬನು ಪುನಃ ಇಂತೆಂದನು -


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು