Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:6 - ಕನ್ನಡ ಸತ್ಯವೇದವು J.V. (BSI)

6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವದು, ಅವನ ಮೇಲಣ [ತೂಗು] ದೀವಿಗೆಯು ನಂದುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; ಅವನ ಮೇಲಣ ತೂಗು ದೀಪವು ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:6
11 ತಿಳಿವುಗಳ ಹೋಲಿಕೆ  

ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.


ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ, ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.


ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಲ?


ಅವರು ಬೆಳಕಿಲ್ಲದ ಕತ್ತಲಲ್ಲಿ ತಡವಾಡುವರು. ಅವರನ್ನು ಅಮಲೇರಿದವರಂತೆ ಓಲಾಡಿಸುವನು.


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವದು.


[ಫರೋಹನೇ,] ನಾನು ನಿನ್ನ ಬೆಳಕನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಮಂಕುಮಾಡಿ ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ಇಂಥವನು ಐಶ್ವರ್ಯವಂತನಾಗುವದಿಲ್ಲ, ಅವನ ಆಸ್ತಿಯು ನಿಲ್ಲುವದಿಲ್ಲ, ಅವನ ಫಲವು ಭಾರದಿಂದ ಭೂವಿುಯ ಕಡೆಗೆ ಬಾಗುವದಿಲ್ಲ.


ಗರ್ವದ ದೃಷ್ಟಿ ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು