Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:9 - ಕನ್ನಡ ಸತ್ಯವೇದವು J.V. (BSI)

9 ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವದು, ಉರುಲು ಅವನನ್ನು ಹಿಡಿಯುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವುದು ಆ ಕಳ್ಳ ಉರುಲು ಅವನನ್ನು ಸಿಕ್ಕಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು. ಉರುಲು ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:9
9 ತಿಳಿವುಗಳ ಹೋಲಿಕೆ  

ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು.


ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಗುಂಡಿಯನ್ನು ಮುಚ್ಚಿದ ತಟ್ಟಿಯ ಮೇಲೆ ನಡೆಯುವನು,


ನೆಲದ ಮೇಲೆ ಪಾಶವೂ ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವವು.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು; ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು