Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:25 - ಕನ್ನಡ ಸತ್ಯವೇದವು J.V. (BSI)

25 ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:25
18 ತಿಳಿವುಗಳ ಹೋಲಿಕೆ  

ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.


ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.


ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.


ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ಕಬ್ಬಿಣದ ಕಂಠದಿಂದ ಬಂಡೆಯ ಮೇಲೆ ಕೆತ್ತಿ ಸೀಸ ಎರೆದು ಶಾಶ್ವತಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟ.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು