Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:6 - ಕನ್ನಡ ಸತ್ಯವೇದವು J.V. (BSI)

6 ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:6
18 ತಿಳಿವುಗಳ ಹೋಲಿಕೆ  

ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು; ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗುಂಪಾಗಿ ಕೂಡಿದ ಬಹುಜನಾಂಗಗಳವರ ಕೈಯಿಂದ ನಾನು ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]!


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ದೇವರು ಒಬ್ಬನ ಸುತ್ತಲೂ ಬೇಲಿ ಹಾಕಿ ದಾರಿಕಟ್ಟಿದ ಮೇಲೆ [ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?]


ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?


ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ತಿಂದು ತಿಂದು ನಿಮಗೆ ಸಾಕಾಗಲಿಲ್ಲವೋ?


ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದೀ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತೀ.


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು