ಯೋಬ 2:6 - ಕನ್ನಡ ಸತ್ಯವೇದವು J.V. (BSI)6 ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು. ಅಧ್ಯಾಯವನ್ನು ನೋಡಿ |
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.