Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:8 - ಕನ್ನಡ ಸತ್ಯವೇದವು J.V. (BSI)

8 ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕೂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:8
14 ತಿಳಿವುಗಳ ಹೋಲಿಕೆ  

ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ


ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.


ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು ಕೀವು ಸೋರಿ ದುರ್ವಾಸನೆಯಾಗಿವೆ.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.


ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ


ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು