Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:15 - ಕನ್ನಡ ಸತ್ಯವೇದವು J.V. (BSI)

15 ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:15
12 ತಿಳಿವುಗಳ ಹೋಲಿಕೆ  

ನೀನು ತಿಂದ ತುತ್ತನ್ನು ಕಕ್ಕಿಬಿಡುವಿ; ನಿನ್ನ ಸವಿಮಾತುಗಳು ವ್ಯರ್ಥ.


ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟುಬಿಡಬೇಕಾಗುವದು.


ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು ಅವನೊಳಗೆ ಹಾವಿನ ವಿಷವಾಗುವದು.


ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವದಿಲ್ಲ.


ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ ಅವನು ತನ್ನ ಇಷ್ಟಸಂಪತ್ತಿನಲ್ಲಿ ಯಾವದನ್ನೂ ಉಳಿಸಿಕೊಳ್ಳುವದಿಲ್ಲ.


ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.


ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲುಕೊಳ್ಳಲಿ.


ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು