Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:19 - ಕನ್ನಡ ಸತ್ಯವೇದವು J.V. (BSI)

19 ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:19
28 ತಿಳಿವುಗಳ ಹೋಲಿಕೆ  

ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?


ನನ್ನ ಜನರ ಸ್ತ್ರೀಯರನ್ನು ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಮಹಿಮೆಯ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.


ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.


ಲೋಕದ ಸೆರೆಯವರನ್ನೆಲ್ಲಾ ತುಳಿದುಬಿಡುವದು,


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತೀ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವದಿಲ್ಲ.


ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಗಳನ್ನು ತೆಗೆದುಕೊಂಡಿದ್ದೀ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದೀ,


ಅವನಿಗೆ ಸಂಬಂಧಿಗಳಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವದು.


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು