Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:2 - ಕನ್ನಡ ಸತ್ಯವೇದವು J.V. (BSI)

2 ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿನಗೆ ಉತ್ತರಕೊಡಲು ನಾನು ತವಕಪಡುತ್ತಿರುವೆ ನನ್ನ ನೊಂದ ಮನ ನನಗೆ ಪ್ರತ್ಯುತ್ತರ ಹೇಳಿಕೊಡುತ್ತದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ತುಂಬಾ ಕಳವಳಗೊಂಡದ್ದರಿಂದ, ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:2
15 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.


ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು - ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕೆಂದೇ ನನ್ನ ಕೋರಿಕೆ ಎಂದು ಅರಿಕೆ ಮಾಡಿಕೊಂಡಳು.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.


ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಭರವಸವುಳ್ಳವನಾಗಿಯೇ ಇದ್ದೆನು.


ಏಕೆಂದರೆ ನನಗೆ ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು.


ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವದೋ? ಮಾತಾಡದೆ ಸುಮ್ಮನೆ ಇರುವದಕ್ಕೆ ಯಾರಿಂದಾದೀತು?


ಆಮೇಲೆ ನಾಮಾಥ್ಯನಾದ ಚೋಫರನು ಹೀಗಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು