Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:23 - ಕನ್ನಡ ಸತ್ಯವೇದವು J.V. (BSI)

23 ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:23
12 ತಿಳಿವುಗಳ ಹೋಲಿಕೆ  

ಆದರೆ ಅವರು ಆ ಮಾಂಸವನ್ನು ಇನ್ನೂ ಆಹಾರಮಾಡಿಕೊಳ್ಳುತ್ತಿರುವಾಗ ಅದು ಮುಗಿದುಹೋಗುವದರೊಳಗಾಗಿಯೇ ಯೆಹೋವನು ಅವರ ಮೇಲೆ ಕೋಪಗೊಂಡು ಬಹಳ ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ಮೋಶೆಯು ತನ್ನ ಕೋಲನ್ನು ಆಕಾಶಕ್ಕೆ ಚಾಚಿದಾಗ ಯೆಹೋವನು ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಉಂಟುಮಾಡಿದನು. ಸಿಡಿಲುಗಳು ನೆಲಕ್ಕೆ ಬಿದ್ದವು. ಯೆಹೋವನು ಐಗುಪ್ತದೇಶದ ಮೇಲೆ ಕಲ್ಲಿನ ಮಳೆಯನ್ನು ಸುರಿಸಿದನು. ಕಲ್ಲಿನ ಮಳೆಯು ಬಹು ಬಲವಾಗಿತ್ತು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ


ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ


ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು ಅವನೊಳಗೆ ಹಾವಿನ ವಿಷವಾಗುವದು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು