Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:28 - ಕನ್ನಡ ಸತ್ಯವೇದವು J.V. (BSI)

28 ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನ ಮನೆಯಲ್ಲಿರುವ ಪ್ರತಿಯೊಂದನ್ನು ದೇವರ ಕೋಪದ ಪ್ರವಾಹವು ಕೊಚ್ಚಿಕೊಂಡುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:28
14 ತಿಳಿವುಗಳ ಹೋಲಿಕೆ  

ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟುಬಿಡಬೇಕಾಗುವದು.


ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ.


ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿಬಿಡುವನು.


ಅದು ನಾಶಲೋಕದವರೆಗೂ ನುಂಗುವ ಬೆಂಕಿಯಾಗಿದ್ದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು