Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:26 - ಕನ್ನಡ ಸತ್ಯವೇದವು J.V. (BSI)

26 ಇಬ್ಬರೂ ದೂಳಿನಲ್ಲಿ ಮಲಗುವರು, ಹುಳಗಳು ಅವರನ್ನು ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:26
12 ತಿಳಿವುಗಳ ಹೋಲಿಕೆ  

ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವದು; ಹುಳವು ಅವನ ಹೆಣವನ್ನು ರುಚಿಯಿಂದ ತಿನ್ನುವದು; ಇನ್ನು ಮೇಲೆ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವದು.


ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು;


ಶ್ಮಶಾನವನ್ನು, ನೀನು ನನ್ನ ತಂದೆ ಎಂದೂ ಹುಳವನ್ನು, ನನ್ನ ತಾಯಿ, ನನ್ನ ತಂಗಿ ಎಂದೂ ಕರೆಯುವದಾದರೆ


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು.


ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನಗೆ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು