Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:6 - ಕನ್ನಡ ಸತ್ಯವೇದವು J.V. (BSI)

6 ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ ನನಗೆ ಭಯವಾಗುತ್ತದೆ; ನನ್ನ ದೇಹವು ನಡುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಈ ವಿಷಯವನ್ನು ನೆನಪು ಮಾಡಿಕೊಂಡಾಗ ಭಯಪಡುತ್ತೇನೆ; ನನ್ನ ದೇಹಕ್ಕೆ ನಡುಕ ಹಿಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:6
8 ತಿಳಿವುಗಳ ಹೋಲಿಕೆ  

ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ಯೌವನಾರಭ್ಯ ಕುಗ್ಗಿದವನೂ ಮೃತಪ್ರಾಯನೂ ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


ಅಂಜಿ ನಡುಗುತ್ತೇನೆ; ದಿಗಿಲು ನನ್ನನ್ನು ಹಿಡಿದದೆ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು