Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:7 - ಕನ್ನಡ ಸತ್ಯವೇದವು J.V. (BSI)

7 ದುಷ್ಟರು ಬಾಳಿ ವೃದ್ಧರಾಗುವದಕ್ಕೂ ಇದಲ್ಲದೆ ಪ್ರಬಲಿಸುವದಕ್ಕೂ ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದುರುಳರು ಮುದುಕರಾಗುವವರೆಗೂ ಬದುಕುವುದೇಕೆ? ಅಂಥವರು ಪ್ರಬಲರು, ಬಲಿಷ್ಠರು ಆಗುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದುಷ್ಟರು ದೀರ್ಘಕಾಲ ಜೀವಿಸುವುದೇಕೆ? ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ? ಅಂಥವರು ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:7
14 ತಿಳಿವುಗಳ ಹೋಲಿಕೆ  

ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ಅವರು ತಮ್ಮ ಹೃದಯವನ್ನು ಬಿಗಿಮಾಡಿದ್ದಾರೆ. ಅಹಂಕಾರದಿಂದ ಮಾತಾಡುತ್ತಾರೆ.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.


ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವೊಂದುಂಟು; ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟರಿಗೆ ಆಗುವದು, ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವದು; ಇದೂ ವ್ಯರ್ಥವೆಂದು ನಾನು ಹೇಳಿದೆನು.


ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು