ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.