Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:23 - ಕನ್ನಡ ಸತ್ಯವೇದವು J.V. (BSI)

23 ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:23
20 ತಿಳಿವುಗಳ ಹೋಲಿಕೆ  

ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರಮಾಡಿಕೊಂಡು ಭಕ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾ ಪವಿತ್ರಾತ್ಮ ಪ್ರೇರಿತರಾಗಿ ಪ್ರಾರ್ಥನೆಮಾಡುತ್ತಾ


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಅವನಿಗೆ ಸಂಬಂಧಿಗಳಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವದು.


ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಆತನು ಲಾಲಿಸಿ ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬದು ಮನಸ್ಸೆಗೆ ಮಂದಟ್ಟಾಯಿತು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು